ಬ್ರೇಕಿಂಗ್ ನ್ಯೂಸ್: ಆ ವಿಷಯಕ್ಕೆ ಟ್ವಿಟರ್ ನಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಕಿಡಿಕಾರಿದ ಕಾಂಗ್ರೆಸ್ ಶಾಸಕ!!!!!ಯಾರು ಆ ಶಾಸಕ???
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಸೋಮವಾರ ಕಾಂಗ್ರೆಸ್ ಪಕ್ಷ ಭಾರತ್ ಬಂದ್ ಗೆ ಕರೆ ನೀಡಿತ್ತು.ಈ ಬೆನ್ನಲ್ಲೇ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ ಕೆ ಸುಧಾಕರ್ ಟ್ವಿಟರ್ ಮೂಲಕ ಸಿಎಂ ಕುಮಾರಸ್ವಾಮಿ ವಿರುದ್ದ ಕಿಡಿಕಾರಿದ್ದಾರೆ.
ಮಾನ್ಯ ಮುಖ್ಯಮಂತ್ರಿಗಳೇ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಅವರನ್ನು ಅನುಸರಿಸಿ ಆಂಧ್ರದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತಗೊಳಿಸಿದ್ದಾರೆ. ಕನಿಷ್ಟ ಶೇ.3 ರಿಂದ 4 ರಷ್ಟು ದರವನ್ನು ಪ್ರತಿ ಲೀ.ಗೆ ಕಡಿಮೆ ಮಾಡಿದ್ದಾರೆ. ಇಡೀ ದೇಶದಲ್ಲೇ ಕರ್ನಾಟಕ ರಾಜ್ಯ ಜೀವನ ಮಾಡಲು ಅತ್ಯಂತ ದುಬಾರಿಯಾಗಿದೆ. ಇದರಿಂದ ಬಡವರು ಹಾಗೂ ಮಹಿಳೆಯರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ಇದರ ಜೊತೆಗೆ ಸಿಎಂ ಅವರ ಭಾವಚಿತ್ರ, ಸಿಲಿಂಡರ್ ಹಾಗೂ ಜ್ವಾಲೆಯ ಚಿತ್ರಗಳನ್ನು ಕೂಡ ಪೋಸ್ಟ್ ಮಾಡಿದ್ದಾರೆ.


Comments
Post a Comment